ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ.
ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಸಂತೋಷ್ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು.
ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ. ಸಂತೋಷ್ರ ಮನೆಗೆ ಶಿವುವವರು ಬಂದಾಗ, ಅನಿತಾ ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ. ತಕ್ಷಣ ಅನಿತಾರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಇನ್ನೂ ವಿಷಯ ತಿಳಿದು ಸಂತೋಷ್ರ ಮನೆಗೆ ಬಂದ ಅನಿತಾ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ವಿಚಾರ ತಿಳಿದು ಸ್ತಳಕ್ಕೆ ಬಂದ ಹೊಳೆಹೊನ್ನೂರು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸಂತೋಷ್ರನ್ನು ಬಂಧಿಸಿದ್ದಾರೆ. ಅನಿತಾರ ಪೋಷಕರು, ಸಂತೋಷ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್