ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ ಫ್ಯಾಕ್ಟರಿ ಔಟ್ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು.
ನೋಡನೋಡುತ್ತಿದ್ದಂತೆ ಬುಲೆಟ್ನ ಹೆಡ್ಲೈಟ್ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್ಲೈಟ್ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.
ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಹಾವಿನ ಗಮನವನ್ನ ಬಟ್ಟೆಯೊಂದರತ್ತ ಸೆಳೆದ ಸ್ನೇಕ್ ಕಿರಣ್ ತಮ್ಮ ಅನುಭವ ಬಳಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇನ್ನೂ ಈ ದೃಶ್ಯವನ್ನು ನೋಡಲು ಅಲ್ಲಿದ್ದವರೆಲ್ಲಾ ಮುಗಿಬಿದ್ದಿದ್ದರಷ್ಟೆ ಅಲ್ಲದೆ, ಹಾವು ಹಿಡಿಯುವುದನ್ನ ತರಹೇವಾರಿ ಸ್ಟೈಲ್ನಲ್ಲಿ ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ರೀಲ್ಸ್ ಗೆ ಹಾಕಿಕೊಳ್ಳುತ್ತಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್