ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake


ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು.

ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ. 



ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಹಾವಿನ ಗಮನವನ್ನ ಬಟ್ಟೆಯೊಂದರತ್ತ ಸೆಳೆದ ಸ್ನೇಕ್​ ಕಿರಣ್ ತಮ್ಮ ಅನುಭವ ಬಳಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಇನ್ನೂ ಈ ದೃಶ್ಯವನ್ನು ನೋಡಲು ಅಲ್ಲಿದ್ದವರೆಲ್ಲಾ ಮುಗಿಬಿದ್ದಿದ್ದರಷ್ಟೆ ಅಲ್ಲದೆ, ಹಾವು ಹಿಡಿಯುವುದನ್ನ ತರಹೇವಾರಿ ಸ್ಟೈಲ್​ನಲ್ಲಿ ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ರೀಲ್ಸ್​ ಗೆ ಹಾಕಿಕೊಳ್ಳುತ್ತಿದ್ದರು. 



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

13 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago