w
Headlines
Home » ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ.




ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4 ಹಸುಗಳ ಪೈಕಿ 2 ಹಸುಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಮನೆಯಲ್ಲಿ ಮಲಗಿದ್ದ ಆದರ್ಶ ಎಂಬ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.




ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರೂ ಟ್ಯಾಂಕರ್‌ನಲ್ಲಿ ನೀರಿಲ್ಲ ಎಂದು ಹಾರಿಕೆ ನೀಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದು, ಬಳಿಕ ತಾವೇ ಬೆಂಕಿ ನಂದಿಸಿರುವುದಾಗಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಸಾಂತ್ವಾನ ಹೇಳಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.