ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ|shivaji jayantji

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ


ರಿಪ್ಪನ್‌ಪೇಟೆ : ಅಪ್ರತಿಮ ಹೋರಾಟ, ವಿಭಿನ್ನ ಯುದ್ಧಕಲೆ, ಸಂಘಟನಾ ಚತುರತೆ, ಆದರ್ಶ ದೇಶ ಪ್ರೇಮದ ಮೂಲಕ ಇಂದಿಗೂ ನಮ್ಮೆಲ್ಲರಿಗೆ ಆದರ್ಶಪ್ರಾಯ ಆಗಿರುವ ಶಿವಾಜಿ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅರಿಯುವುದು ಅಗತ್ಯ ಎಂದು ಯುವ ಚಿಂತಕ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಹೇಳಿದರು.




ಪಟ್ಟಣದಲ್ಲಿ ಮರಾಠ ಸಮಾಜ ಭಾನುವಾರ ಆಯೋಜಿಸಿದ್ದ ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಯಿ ಜೀಜಾಬಾಯಿ ಶಿವಾಜಿಗೆ ಯುದ್ಧ ಕಲೆ ಕಲಿಸಿದ್ದಳು, ಎಂತಹ ಕಷ್ಟ ಎದುರಾದರೂ ಅದನ್ನು ತಾಳ್ಮೆಯಿಂದ ಎದುರಿಸುವ ಕಲೆ ಅವರು ಹೊಂದಿದ್ದ. ಇಡೀ ದೇಶದಲ್ಲಿ ಬ್ರಿಟಿಷರು, ಮೊಘಲರು ಆಳ್ವಿಕೆ ನಡೆಸುತ್ತಿದ್ದ ಕಾಲದಲ್ಲಿ ಸ್ವರಾಜ್ಯದ ಕಲ್ಪನೆ ಕಂಡಿದ್ದ ಶಿವಾಜಿ 16ನೇ ವಯಸ್ಸಿನಲ್ಲೇ ಹೋರಾಟ ಮನೋಭಾವ ಇಟ್ಟುಕೊಂಡಿದ್ದರು ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬ ಯುವಕ ಅರಿಯಬೇಕೆಂದರು.

ಛತ್ರಪತಿ ಶಿವಾಜಿ ಪ್ರತಿಮೆಗೆ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಪುಷ್ಪ ಹಾಕುವುದರೊಂದಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿವಾಜಿಯಲ್ಲಿನ ರಾಷ್ಟ್ರ ಪ್ರೇಮ ದೇಶ ಭಕ್ತಿ ಇಂದಿನ ಯುವ ಜನಾಂಗಕ್ಕೆ ಮಾರ್ಗದರ್ಶಿಯಾಗಬೇಕು ಹಾಗೂ ಮರಾಠ ಜನಾಂಗಕ್ಕೆ ಸೀಮಿತವಾಗದೇ ಸರ್ವ ಜನಾಂಗದವರು ಈ ಜಯಂತ್ಯೋತ್ಸವವನ್ನು ಆಚರಿಸುವಂತಾಗಬೇಕು ಎಂದರು.

ಛತ್ರಪತಿ ಶಿವಾಜಿ ಪ್ರತಿಮೆಯ ಮೆರವಣಿಗೆ ಹಾಗೂ ಯುವಕರ ಬೈಕ್ ರ‍್ಯಾಲಿಯೊಂದಿಗೆ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಗಮನ ಸೆಳೆಯಿತು.





ಶಿವಾಜಿ ಮರಾಠ ಸಂಘದ ಅಧ್ಯಕ್ಷ ವೈ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.

ಗೋಸಾಯಿ ಮಹಾಸಂಸ್ಥಾನ ಮಠದ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಡಾ.ರಾಜಾನಂದಿನಿ, ಸಮಾಜದ ಮುಖಂಡರಾದ ತುಳೋಜಿರಾವ್, ಎಲ್.ದೇವರಾಜ, ರಾಮಚಂದ್ರ, ದೇವರಾಜ್‌ಕುಷನ್, ಸುಂದರೇಶ್, ಎನ್.ಚಂದ್ರೇಶ್, ದಿವಾಕರ, ಕೃಷ್ಣ ಚಂದಳ್ಳಿ, ಶ್ರೀಮಂತ, ಹೆಚ್.ಎಸ್.ಶಿವಕುಮಾರ್ ಇನ್ನಿತರರು ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು‌.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

8 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago