ರಿಪ್ಪನ್ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ ಅಣ್ಣಪ್ಪ ರವರನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ತಮ್ಮಡಿಕೊಪ್ಪದಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.
ನಮ್ಮೂರಿನ ಪ್ರತಿಭೆ ಸಂಗೀತ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಉತ್ತುಂಗಕ್ಕೆ ಏರಲಿ ಎಂದು ಈ ಸಂದರ್ಭದಲ್ಲಿ ಶಾಸಕರು ಶುಭ ಹಾರೈಸಿದರು.
ರಿಪ್ಪನ್ಪೇಟೆ ಪಟ್ಟಣದ ಶ್ರೀ ಬಸವೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಹಾಗೂ ಪ್ರವೀಣ್ ದಂಪತಿಗಳ ಪುತ್ರಿ ಯಾಗಿದ್ದಾರೆ.
ಈ ಸಂಧರ್ಭದಲ್ಲಿ ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್ ,ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ,ಮುಖಂಡರಾದ ವೀರೇಶ್ ಆಲುವಳ್ಳಿ,ಎನ್ ಆರ್ ದೇವಾನಂದ್ ,ಸುಂದರೇಶ್ , ನಾಗರತ್ನ ದೇವರಾಜ್ ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್