ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ !
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ.
ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ.
ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ.
ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು ರೈಡ್ ಗೆ ಬಂದ ಹಾಗೇ ಮಾಡಿ ಕೈ ಬಿಸಿ ಮಾಡಿಕೊಂಡು ಹೋಗುತಿದ್ದರು.. ಇದರಿಂದ ರೊಚ್ಚಿಗೆದ್ದ ಮಹಿಳೆಯರು ಇಂದು ಮದ್ಯ ಮಾರಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ.
ಮುಂದೊಂದು ದಿನ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ನಿಲ್ಲಿಸದೇ ಕೇವಲ ಲಂಚಬಾಕತನ ನಡೆಸುತಿದ್ದಲ್ಲಿ ಅವರಿಗೂ ಈ ಸೇವೆ ತಪ್ಪಿದ್ದಲ್ಲ ಎಂದು ಬಸವಾಪುರದ ಮಹಿಳೆಯೊಬ್ಬರು ಎಚ್ಚರಿಕೆ ನೀಡಿದ್ದಾರೆ.