ರಿಪ್ಪನ್‌ಪೇಟೆ : ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ರಿಪ್ಪನ್‌ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ರಾತ್ರಿ ಕೋಟೆತಾರಿಗದಲ್ಲಿ ಗಸ್ತು ತಿರುಗುತಿದ್ದಾಗ ಕೋಟೆತಾರಿಗ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಕೋಟೆತಾರಿಗ ಮಾರ್ಗವಾಗಿ ಸಾಗಿಸುತ್ತಿದ್ದ KA 42 A 4115 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿಎಸ್ ಐ ಶಿವಾನಂದ್ ಕೆ, ಹೆಚ್ ಸಿ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.