ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ.




ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




ವೀಳ್ಯದ ಎಲೆ ವ್ಯಾಪಾರಿಯಾದ ಇವರು ಜನರ ಪ್ರೀತಿ ಪಾತ್ರಕ್ಕೆ ಹಾಗೂ ವಿಶ್ವಾಸ ಗಳಿಸಿಕೊಂಡಿದ್ದರು ಸರಳ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದ ಇವರು ಇಬ್ಬರು ಪುತ್ರಿಯರು  ಹಾಗೂ ಓರ್ವ ಪುತ್ರ ಇದ್ದು ಇವರ ಹೆಂಡತಿ ಅಂಗನವಾಡಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.




ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಣೋತ್ತರ ಪರೀಕ್ಷಾ ಕೊಠಡಿಯಲ್ಲಿ ವಿದ್ಯುತ್ ಇಲ್ಲದೆ ಪರದಾಡಿದ ಮೃತರ ಕುಟುಂಬಸ್ಥರು

ಇಂದು ಮಧ್ಯಾಹ್ನ ಮೂಗೂಡ್ತಿ ನಿವಾಸಿ ನಾಗರಾಜ್ ಮೃತಪಟ್ಟಿದ್ದು ಸಂಜೆ 05 ಗಂಟೆಯ ಸುಮಾರಿಗೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ತರಲಾಗಿತ್ತು.

ಆದರೆ ವೈದ್ಯರು ಸಕಾಲದಲ್ಲಿ ದೊರೆಯದೇ ಮರಣೋತ್ತರ ಪರೀಕ್ಷೆ ವಿಳಂಬವಾಗಿದಲ್ಲದೇ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲಿ ವಿದ್ಯುತ್ ಲೈನ್ ಶಾರ್ಟ್ ಆಗಿ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದೇ ಮೃತರ ಕುಟುಂಬಸ್ಥರು ಪರದಾಡುವ ಸ್ಥಿತಿ ಕಂಡುಬಂತು.

ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಆರೋಗ್ಯ ರಕ್ಷಾ ಸಮಿತಿಯವರಿಗೆ ಹಿಡಿಶಾಪ ಹಾಕುತ್ತಾ ಬೆಳಕಿನ ವ್ಯವಸ್ಥೆಗೆ ಒದ್ದಾಡುತಿದ್ದ ದೃಶ್ಯ ಕಂಡುಬಂದಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

14 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago