ರಿಪ್ಪನ್ ಪೇಟೆಯ ಮೃತ ಯೋಧನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ – ಕುಟುಂಬಕ್ಕೆ ಸಾಂತ್ವನ
ರಿಪ್ಪನ್ ಪೇಟೆ :ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಸಂದೀಪ್ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಇಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ.
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಯೋಧನ ಮನೆಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ನಂತರ ಮಾದ್ಯಮದೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ದೇಶ ಸೇವೆಯನ್ನು ಮಾಡುವ ಸದುದ್ದೇಶ ದಿಂದ ಗ್ರಾಮೀಣ ಪ್ರದೇಶದ ಯುವಕನೂಬ್ಬ ಸೈನಕ್ಕೆ ಸೇರಿ ಹಗಲಿರುಳು ದೇಶದ ಜನರ ರಕ್ಷಣೆಗಾಗಿ ಕಾಯಕವನ್ನು ಮಾಡುತಿದ್ದದ್ದು ಹೆಮ್ಮೆಯ ಸಂಗತಿಯಾಗಿತ್ತು,ಇಂದು ಅವರ ಅಕಾಲಿಕ ಮರಣ ನನಗೆ ಅತೀವ ನೋವುಂಟು ಮಾಡಿದೆ,ಸೈನ್ಯಕ್ಕಾಗಿ ತುಡಿಯುತಿದ್ದ ಸಂದೀಪ್ ನ ಅಕಾಲಿಕ ಮೃತ್ಯು ನಮ್ಮ ದೇಶಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದರು.
ಪಾರ್ಥಿವ ಶರೀರವನ್ನು ಮಣಿಪುರದಿಂದ ಊರಿಗೆ ತರಲು ಸರಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು, ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ. ಕೆ.ರಾವ್ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ.ಬಿ.ಮಂಜುನಾಥ್. ಮುಖಂಡರುಗಳಾದ ಕಗ್ಗಲಿ ಲಿಂಗಪ್ಪ, ಆರ್ ಟಿ ಗೋಪಾಲ್. ಸುಧೀಂದ್ರ ಪೂಜಾರಿ. ಎನ್. ಸತೀಶ್. ಪಿ ಸುಧೀರ್. ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್