ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ
ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು.
ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ ?? ಟಿಕೆಟ್ ಅಂತಿಮವಾಗಿ..?? ಎಂಬ ಊಹಾಪೋಹಗಳು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಇಂದು ಪಟ್ಟಣದಲ್ಲಿ ಮಾದ್ಯಮದವರ ಪ್ರಶ್ನೆಗೆ ನನ್ನ ಸ್ಪರ್ಧೆ ಇಲ್ಲಾ ಎನ್ನುವುದರ ಮೂಲಕ ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.