ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP

ಶಾಸಕ ಹಾಲಪ್ಪ ವಿರುದ್ಧ ಬಿಎಸ್‌ವೈಗೆ ದೂರು

ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್‌ವೈ, ಸಮಾಧಾನ ಚಿತ್ತರಾಗಿ ಕೇಳಿಸಿಕೊಂಡಿ ದ್ದಾರೆ ಎನ್ನುವುದೇ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಪ್ರಾಮಾಣಿಕವಾಗಿ ಕೆಲಸಮಾಡುವವರಿಗೆ ಟಿಕೆಟ್ ಕೊಡಿ ಎಂದು ವಿರೋಧಿಗಳು ಮಾಜಿ ಸಿಎಂ ಎದುರು ಒಕ್ಕೊರಲ ಮನವಿ ಮಾಡಿದ್ದಾರೆ.




2008ರಿಂದಲೂ ನಿಮ್ಮ (ಬಿಎಸ್‌ವೈ) ಗರಡಿಯಲ್ಲೇ ಬೆಳೆದಿರುವ ಹಾಲಪ್ಪನ ವರು ಪ್ರಬುದ್ಧ ರಾಜಕಾರಣಿಯಂತೆ ಕಾಣಿಸುತ್ತಾರೆ. ಇಲ್ಲಿ ಒಂದು ಬಾರಿ ಗೆದ್ದು ಜನಾಂಗೀಯ ಹಲ್ಲೆ ಮಾಡಿಸಿರುವ ಅವರು, ಮತ್ತೊಮ್ಮೆ ಗೆದ್ದರೆ ಸಾಗರವನ್ನೇ ದೋಚಿಬಿಡುತ್ತಾರೆ. 2018ರಲ್ಲಿ ನಿಮಗೆ ಮನಸ್ಸಿಲ್ಲದಿದ್ದರೂ ನಾವೇ ಹಠ ಮಾಡಿ ಹಾಲಪ್ಪನವರಿಗೆ ಟಿಕೆಟ್ ಕೊಡಿಸಿ

ಕೇವಲ ದೂರುಗಳನ್ನು ಮಾತ್ರ ಹೊತ್ತೊಯ್ಯದೆ, ಅವೆಲ್ಲಕ್ಕೂ ಹತ್ತಾರು ಸಾಕ್ಷಿಗಳನ್ನು ಒದಗಿಸಿದ್ದಾರೆ. ಸದ್ಯ ಹಾಲಪ್ಪನವರನ್ನು ಮಾತನಾಡಿಸುವುದು ಕಷ್ಟ ತಮ್ಮದೇ ಗುಂಪು ಕಟ್ಟಿಕೊಂಡು ತಿರುಗುತ್ತಾರೆ. ಹಿಂದೂಪರ ಸಂಘಟನೆ ಗಳ ಕಾರಕ್ರಮಕ್ಕೆ ಬಾರದಿರುವುದು, ಪ್ರಮುಖವಾಗಿ ಲಕ್ಷ್ಮೀ ಪೂಜೆಗೂ ಆಗ ಮಿಸದೆ ಅಸಡ್ಡೆ ಮಾಡಿದ್ದು ಕಾರಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ, ಪರ್ಸೆಂಟೇಜ್ ರಾಜಕೀಯ, ಅವರ ಆಪ್ತರ ಅಹಂಕಾರದ ಮಾತುಗಳು, ಹೀಗೆ ಪಟ್ಟಿ ದೊಡ್ಡದಿದೆ. ಜತೆಯಲ್ಲಿ ಶಾಸಕರನ್ನು ಗೆಲ್ಲಿಸಿದ್ದೆವು.

ಆದರೆ ನಂತರ ಅವರ ಅವಾಂತರ ಮಿತಿ ಮೀರಿದೆ. ಹಾವಳಿ ತಡೆಯಲು ನಮಗೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪಕ್ಷ, ತತ್ವಸಿದ್ಧಾಂತಗಳಿಗೆ ಬದ್ಧರಾಗಿರುವ,
ಸಂಘಟನೆಯ ಹಿರಿಯರಿಂದ ಬೇರ್ಪಡಿಸುವ ಪಿತೂರಿಯಲ್ಲಿ ಕೆಲ ಆಪ್ತರ ಹಿತ್ತಾಳೆ ಕಿವಿ ಕಾರಣವಾಗಿದೆ. ಹಾಲಪ್ಪನವರ ವಿರುದ್ಧ ದೂರು ನೀಡಿದವರ ವಿರುದ್ಧ ಹಲ್ಲೆ ನಡೆಸುವುದು, ಅವರ ಜಾಗಕ್ಕೆ ತೊಂದರೆ ಕೊಡುವುದು, ಹೆದರಿಸುವಂಥ ಚಟುವಟಿಕೆಗಳೂ ನಡೆಯುತ್ತಿವೆ. ಆದ್ದರಿಂದ ತಾಲೂಕಿನ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಇದನ್ನು ಸರಿಪಡಿಸುವ ಉದ್ದೇಶದಿಂದ ಹೊಸಬರನ್ನು ಆಯ್ಕೆ ಮಾಡಬೇಕು ಎಂದು ಎಲ್ಲರೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.




ವಿಶೇಷವೆಂದರೆ ಮಾಜಿ ಸಿಎಂ ಹಾಗೂ ವಿಜಯೇಂದ್ರ ಅವರು ಈ ಎಲ್ಲ ಆರೋಪಗಳನ್ನು ಸಮಾಧಾನದಿಂದ ಆಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ತಂಡ ಇಷ್ಟಕ್ಕೆ ಸುಮ್ಮನಾಗದೆ ಎಲ್ಲ ದಾಖಲೆಗಳನ್ನು ಹಿಂದಿಗೆ ಭಾಷಾಂತರಿಸಿ, ಕೇಂದ್ರ ನಾಯಕರಿಗೆ ಮತ್ತು ಸಂಘದ ಹಿರಿಯರಿಗೆ ಕಳುಹಿಸುವ ಸಿದ್ಧತೆಯಲ್ಲಿ

ಸಾಗರದ ಆಶ್ರಯ ಸಮಿತಿ ಅಧ್ಯಕ್ಷ ಯು.ಎಚ್. ರಾಮಪ್ಪ ಹಿರಿಯ ವಕೀಲ ಮತ್ತು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಎನ್.ಶ್ರೀಧರ್, ಶಿಮುಲ್ ಅಧ್ಯಕ್ಷ ಶ್ರೀಪಾದ ಹೆಗಡೆ ನಿಸರಾಣಿ, ವೀರಶೈವ ಮುಖಂಡರಾದ ಜಗದೀಶ್ ಗೌಡ, ವಸಂತ್ ಕುಮಾರ್‌, ಬಿಜೆಪಿ ಮುಖಂಡರಾದ ಸತೀಶ್ ಹಕ್ರೆ, ರಾಘವೇಂದ್ರ ಶೇಟ್, ಕೃಷ್ಣಮೂರ್ತಿ ಮಂಕಳಲೆ ಮತ್ತಿತರ ಮುಖಂಡರು ನಿಯೋಗದಲ್ಲಿ ಇದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

5 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

12 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago