ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನಆಚರಿಸಲಾಗಿದೆ.
ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ. ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು ನಿರಂತರ ಸ್ಟೆಪ್ಸುಹಾಕಿ ಕುಣಿದರು.
ಈ ಬಾರಿ ಶಿವಮೊಗ್ಗದಲ್ಲಿ ಹಿಂದೂ ಕೇಸರಿ ಅಲಂಕಾರ ಸಮಿತಿ ಗೋಪಿ ವೃತ್ತದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಹೋಳಿ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಈ ಜಾಗದಲ್ಲಿ ಹೋಳಿ ಹಬ್ಬ ಆಚರಿಸಲಾಗಿದೆ.
ಮಧ್ಯದಲ್ಲಿ ಜೈ ಶ್ರೀರಾಮ್, ಜೈ ಭಜರಂಗಿ ಹೀಗೆ ಘೋಷಣೆಗಳು ಮೊಳಗಿದವು. ಬಣ್ಣವನ್ನ ಎರಚಿ ಯುವಕ ಯುವತಿಯರು ಸಂಭ್ರಮ ಪಟ್ಟರೆ ಸ್ಪ್ರಿಕ್ಲಿಂಗ್ ಮೂಲಕ ನೀರು ಹಾರಿಸಲಾಯಿತು.
ರಿಪ್ಪನ್ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು
ರಂಗಿನ ಹಬ್ಬ ಹೋಳಿಯನ್ನು ಬುಧವಾರ ರಿಪ್ಪನ್ಪೇಟೆಯಲ್ಲಿ ಬಣ್ಣವನ್ನು ಪರಸ್ಪರ ಎರಚುವುದರೊಂದಿಗೆ ಯುವಕರು ಸಂಭ್ರಮಿಸಿದರು.
ಇಲ್ಲಿನ ವಿನಾಯಕ ವೃತ್ತದಲ್ಲಿ ಇಂದು ಬೆಳಗ್ಗೆಯಿಂದಲೇ ಯುವಕರ ತಂಡ ಹೋಳಿ ಬಣ್ಣವನ್ನು ಪರಸ್ಪರ ಎರಚಿಕೊಳ್ಳುವುದರೊಂದಿಗೆ ಓಕುಳಿ ಆಡಿದರು.
ಮಂಗಳವಾರ ರಾತ್ರಿ ವಿನಾಯಕ ವೃತ್ತದಲ್ಲಿ ಕಾಮನನನ್ನು ದಹಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್