ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.
ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ಬಜರಂಗದಳದ ಕಾರ್ಯಕರ್ತರು ಪಾರ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ ಹಲವರು ಹೋಟೆಲ್ನಿಂದ ಹೊರಗೆ ಬರುತ್ತಿರುವುದು ಕಂಡುಬಂದಿತು.
ತಡರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂದು ಬಜರಂಗದಳದ ಮುಖಂಡ ರಾಜೇಶ್ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ. ”ಮಹಿಳೆಯರ ಲೇಟ್ ನೈಟ್ ಪಾರ್ಟಿ ನಡೆಯಲಿರುವ ಬಗ್ಗೆ ವಾರದ ಹಿಂದೆಯೇ ಪೊಲೀಸರ ಗಮನಕ್ಕೆ ತಂದಿದ್ದೆವು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ಆಯೋಜಿಸಬಾರದು.
ಆದರೆ, ಆಕ್ಷೇಪದ ನಡುವೆಯೂ ಪಾರ್ಟಿ ಆಯೋಜಿಸಲಾಗಿತ್ತು. ನಾವು ಪೊಲೀಸರೊಂದಿಗೆ ಹೋಗಿ ಪಾರ್ಟಿಯನ್ನು ನಿಲ್ಲಿಸಿದೆವು. ಅಲ್ಲಿ ಪಬ್ ನಂತಹ ವಾತಾವರಣ ಇತ್ತು ” ಎಂದು ರಾಜೇಶ್ ಗೌಡ ಹೇಳಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್