ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.
ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶವವಾಗಿ ಪತ್ತೆಯಾದ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಹಣಕಾಸಿನ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡಿರುವುದಾಗಿ ಉಲ್ಲೇಖಿಸಿದ್ದಾನೆ.
ಸಿದ್ದಾಪುರ ತಾಲೂಕಿನ ವ್ಯಕ್ತಿಯೊಬ್ಬ ಹಣ ಕೊಡುವಂತೆ ದುಂಬಾಲು ಬಿದ್ದಿದ್ದು ಆತನ ಕಿರುಕುಳುಕ್ಕೆ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಪತ್ತೆಯಾಗಿರುವುದು ಈ ಎಲ್ಲಾ ಘಟನಾವಳಿಗೆ ಹಣಕಾಸಿನ ಒತ್ತಡವೇ ಕಾರಣ ಎಂಬುದು ತಿಳಿದು ಬಂದಿದೆ.ಘಟನೆಯ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.