ಸೇನಾ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ‌ ಮೋದಿ|modi

ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು.




ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್, ಆಯನೂರು ಮಂಜುನಾಥ್ ಸೇರಿದಂತೆ ಹಲವು ಪ್ರಮುಖರು ಪ್ರಧಾನಿಯವರನ್ನು ಸ್ವಾಗತಿಸಿದರು.




ಇದಾದ ನಂತರ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದಲ್ಲಿ 5.40ಕ್ಕೆ ಪ್ರಧಾನಿ ಮೋದಿಯವರು ನವದೆಹಲಿಯತ್ತ ಪ್ರಯಾಣ ಬೆಳೆಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗದಲ್ಲಿ ಏರ್ ಪೋರ್ಟ್ ಆದ ನಂತರ ಪ್ರಧಾನಿ ಮೋದಿ ಎರಡನೇ ಬಾರಿ ಬಂದಿದ್ದಾರೆ. ಯಶಸ್ವಿಯಾಗಿ ಲ್ಯಾಂಡ್ ಆಗಿ ಟೇಕಾಫ್ ಆಗಿದ್ದಾರೆ ಎಂದರು.

ಇದು ಸಂತೋಷದ ಸಂಗತಿ, ರಾಜ್ಯದ ಯಾವುದೇ ಏರ್ ಪೋರ್ಟ್ ನಲ್ಲಿ ಈ ರೀತಿ ಆಗಲು ಸಾಧ್ಯವಿಲ್ಲ. ಸದ್ಯದಲ್ಲೇ ಡೊಮೆಸ್ಟಿಕ್ ಏರ್‌ಲೈನ್ ಬರುತ್ತವೆ.ಇದಕ್ಕೂ ಮುನ್ನವೇ ಪ್ರಧಾನಿಯವರು ಏರ್ ಪೋರ್ಟ್ ನಲ್ಲಿ ಸಂಚರಿಸಿದ್ದಾರೆ ಎಂದರು.

ದಾವಣಗೆರೆಯಲ್ಲಿ ಬಹಳ ದೊಡ್ಡ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದಾರೆ. ಅದ್ಭುತವಾಗಿ ಜನಸಂದಣಿ ಸೇರಿತ್ತು. ಜನಸಂದಣಿ ಮಧ್ಯದಲ್ಲಿ ಮೋದಿಯವರು ತೆರಳಿ ಜನರತ್ತ ಕೈಬೀಸಿದರು.ಚುನಾವಣೆ ಪೂರ್ವ ಜನಸ್ಪಂದನೆ ಹೇಗಿದೆ ಅಂತ ದಾವಣಗೆರೆ ಕಾರ್ಯಕ್ರಮದಿಂದ ಗೊತ್ತಾಗಿದೆ ಎಂದರು.




ಮೋದಿ ಆಗಮನದಿಂದ ಬಿಜೆಪಿಗೆ ಹೊಸ ಹುರುಪು ನೀಡಿದಂತಾಗಿದೆ. ನಾವೆಲ್ಲರೂ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಅವರನ್ನ ಬರಮಾಡಿಕೊಂಡೆವು. ಪಕ್ಷದ ಆಯ್ದ ಕಾರ್ಯಕರ್ತರನ್ನು ಮೋದಿಯವರು ಭೇಟಿಯಾಗಿದ್ದಾರೆ. ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago