Headlines

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.




ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಪರಿಣಾಮ ಸತೀಶ್ ರಸ್ತೆ ಬದಿಯ ಚರಂಡಿಗೆ ಬಿದ್ದು ಚರಂಡಿಯಲ್ಲಿಯ ಕಲ್ಲು ತಲೆಗೆ ತಾಗಿ ಬಲವಾದ ರಕ್ತಗಾಯವಾಗಿತ್ತು.




ನಂತರ ಸ್ಥಳೀಯರು 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಶಿವಮೊಗ್ಗದ ಮೆಗ್ಗಾನ್ ಗೆ ಕಳುಹಿಸಿಕೊಟ್ಟಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ರಾತ್ರಿ 9 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.




ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *