ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಪರಿಣಾಮ ಸತೀಶ್ ರಸ್ತೆ ಬದಿಯ ಚರಂಡಿಗೆ ಬಿದ್ದು ಚರಂಡಿಯಲ್ಲಿಯ ಕಲ್ಲು ತಲೆಗೆ ತಾಗಿ ಬಲವಾದ ರಕ್ತಗಾಯವಾಗಿತ್ತು.
ನಂತರ ಸ್ಥಳೀಯರು 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಶಿವಮೊಗ್ಗದ ಮೆಗ್ಗಾನ್ ಗೆ ಕಳುಹಿಸಿಕೊಟ್ಟಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ರಾತ್ರಿ 9 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್