ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.




ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.




ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ. ಮುಂದಿನ ವರ್ಷ ಎಲ್ಲಾ ನಿಯಮಗಳನ್ನ ಪಾಲಿಸಿ. ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

10 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago