ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ
ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾರಥೋತ್ಸಕ್ಕೆ 2023ರ ಮಾರ್ಚ್ 12ರ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಚಾಲನೆ ನೀಡಿದರು.
ಸಂಜೆ ನಾಗವಾಹನ ಉತ್ಸವವು ಜರುಗಿತು. ಈ ಎಲ್ಲಾ ಪೂಜಾ ಹಾಗೂ ಉತ್ಸವಗಳಲ್ಲಿ ಧರ್ಮ ಬಾಂಧವರು ಪಾಲ್ಗೊಂಡಿದ್ದರು.
ಮಾ. 13-ಸಿಂಹವಾಹನೋತ್ಸವ, ಮಾ. 14 ಬೆಳ್ಳಿ-ಪುಷ್ಪರಥೋತ್ಸವ, ಮಾ. 15 ಮೂಲಾನಕ್ಷತ್ರದಂದು ಮಹಾರಥೋತ್ಸವ, ಮಾ. 16 ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ 108 ಕಲಶಗಳ ಮಹಾಭಿಷೇಕ ಮತ್ತು ಸಂಘ ಪೂಜೆ, ಮಾ. 17 ಕುಂಕುಮೋತ್ಸವ ಮತ್ತು ಧ್ವಜಾವರೋಹಣದೊಂದಿಗೆ ಸಂಪನ್ನಗೊಳ್ಳಲಿದೆ. ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನವನ್ನು ಈ ಎಲ್ಲಾ ಕಾರ್ಯಕ್ರಮಗಳು ನೆರವೇರಲಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್