ಗೃಹ ಸಚಿವರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಮೂಲಸೌಕರ್ಯ ವಂಚಿತ ಮಾದ್ಲುಮನೆ ,ಉಂಬ್ಳೆಬೈಲು ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  60 ವರ್ಷಗಳಿಂದ ಗ್ರಾಮ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರಿಗೆ ಚುನಾವಣೆಯನ್ನು ಬಹಿಷ್ಕರಿಸಲು…

Read More

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

ರಿಪ್ಪನ್‌ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ  ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ‌ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

RIPPONPET NEWS ರಿಪ್ಪನ್‌ಪೇಟೆ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದು ಮಾಜಿ ಗ್ರಾಪಂ ಸದಸ್ಯೆ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಿಪ್ಪನ್‌ಪೇಟೆ ಶಬರೀಶನಗರದ ಕಾಂಗ್ರೆಸ್ ಮುಖಂಡರಾಗಿದ್ದ ಮಂಜನಾಯ್ಕ್ ಮತು ಮಾಜಿ ಗ್ರಾಪಂ ಸದಸ್ಯರಾದ ಗಿರಿಜಾ ಎಂ ನಾಯ್ಕ್ ರವರು ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಳವಳ್ಳಿ ಗ್ರಾಮದ PLD ಬ್ಯಾಂಕ್ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾಗಿದ್ದ ಗೋಪಾಲಣ್ಣ ಹಾಗೂ ಅವರ ಬೆಂಬಲಿಗರಾದ ರಮೇಶ್, ಕುಮಾರ್, ಉಮಾಪತಿ,…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ|Reward

ಕರ್ನಾಟಕ ರಾಜ್ಯದ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ. 2022 ನೇ ಸಾಲಿನ ಮುಖ್ಯಮಂತ್ರಿ ಪದಕ ಜಿಲ್ಲೆಯಲ್ಲಿ ಮೂವರಿಗೆ ಲಭಿಸಿದೆ. ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕೆ.ಶಿವಕುಮಾರ್, ಡಿಎಆರ್ ನ ಸಿಬ್ಬಂದಿ ಜೈಜಗದೀಶ್ ಗೆ ಲಭಿಸಿದೆ. ಮುಖ್ಯಮಂತ್ರಿ ಪದಕವನ್ನ ನೀಡುವ…

Read More

ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿ : ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.   ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…

Read More

ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More