ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news
ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಈ ವೇಳೆ…