ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital
ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ…