Headlines

ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital

ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದರ್ಶ್ ನಿಧನ|accident

ಹೊಸನಗರ: ಸೊನಲೆ ಜಂಕ್ಷನ್ ಬಳಿ  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಟ್ಟಣದ ಯುವಕ ಆದರ್ಶ್ ನಿಧನ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ (23)ಕಳೆದ ಭಾನುವಾರದಂದು ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡಿದ್ದರು, ಇವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಮರಳಿ ಕರೆದುಕೊಂಡು ಬಂದು ಚಿಕಿತ್ಸೆ  ನೀಡಲಾಗುತ್ತಿತ್ತು, ವಿಧಿವಶಾತ್ ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಗಡಿಪಾರಿಗೆ ಆಗ್ರಹ|SDPI

ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು ಆಜಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುದ್ವೇಷದ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ಮಾರಾಣಾಂತಿಕ ದಾಳಿ – ಓರ್ವ ಸಾವು,ಇನ್ನೊಬ್ಬ ಗಂಭೀರ|attack

ಶಿವಮೊಗ್ಗದಲ್ಲಿ ಮತ್ತೊಮ್ಮೆ ರೌಡಿಗಳ ಅಟ್ಟಹಾಸ ಸದ್ದು ಮಾಡಿದೆ.ಚೀಲೂರಿನ ಬೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ದಾಳಿ ನಡೆದಿದ್ದು ಈ ಪೈಕಿ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ಮಧು ಎಂಬಾತನ ಸ್ಥಿತಿ ಗಂಭೀರವಾಗಿದೆ. ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿ ಬೋವಿನ ಕೋವಿ ಬಳಿ ಮಧು ಮತ್ತು ಆಂಜನೇಯನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ….

Read More
Exit mobile version