ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್
ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ.
ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಸ್ಥಳೀಯರ ಮೊಬೈಲ್‌ನಲ್ಲಿ ಆಜಾನ್ ಕೂಗಿದ ದೃಶ್ಯ
ಸೆರೆಯಾಗಿದೆ. ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಮಾಡಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದ್ದರು.
ಪ್ರತಿಭಟನೆ ವೇಳೆ ಮುಸ್ಲಿಂ ಸಮುದಾಯದ ಯುವಕ ಮೌಸಿನ್ ಆಜಾನ್ ಕೂಗಿ ಉದ್ಧಟತನ ಪ್ರದರ್ಶನ ಮಾಡಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿದ್ದಾನೆ. ಆಜಾನ್ ಕೂಗುವುದನ್ನು ಕಂಡ ಪೊಲೀಸರು ಬೆದರಿಸಿದ್ದರು. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ, ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ, ಅಲ್ಲಾ ಬಗ್ಗೆ ಮಾತನಾಡಿದ್ದು ಎಂದು ಕೂಗಾಡಲಾಗಿದೆ.
ಯುವಕ ಈ ಕೃತ್ಯಕ್ಕೆ ಹಿಂದು ಪರ ಸಂಘಟನೆಗಳು ಸೇರಿದಂತೆ.ನಾಗರಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಟ್ಟಡಕ್ಕೆ ಅದರದ್ದೇ ಆದ ಘನತೆ ಇರುತ್ತದೆ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇರುತ್ತದೆ. ಆದರೆ, ಇಂತಹ
ಉದ್ದಟತನವನ್ನು ಯಾರೂ ಪ್ರದರ್ಶನ ಮಾಡಬಾರದು. ಅವರೇ ಹೇಳಿದಂತೆ ನಾಳೆ ವಿಧಾನಸೌಧದಲ್ಲೂ ಕೂಗಲು ಮುಂದಾಗುತ್ತಾರೆ. ಇಂಥ ಕೃತ್ಯಗಳಿಗೆ ಮೊದಲ ಹಂತದಲ್ಲಿಯೇ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಯುವಕನನ್ನು ಕರೆದು ಎಚ್ಚರಿಕೆ :
ಅಜಾನ್ ಕೂಗಿದ ಯುವಕನನ್ನು ಕರೆದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಕೇಸ್‌ವೊಂದನ್ನು ದಾಖಲಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಮಾದ್ಯಮಕ್ಕೆ ತಿಳಿಸಿದ್ದಾರೆ.