ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ ಬಜರಂಗ ದಳ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಹಿಂದುಗಳಿಗೆ ಬೈಬಲ್ ನೀಡಿ ಪ್ರಾರ್ಥನೆ ಮಾಡಿಸಲಾಗುತ್ತಿತ್ತು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಬಜರಂದಗಳದವರು ದಾಳಿ ಮಾಡಿ ಆಕ್ರೋಶವನ್ನು ಹೊರಹಾಕಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ತುಂಗಾ ನಗರ ಪೊಲೀಸರು ಪಾದ್ರಿ ಮಣಿಕಂಠ ಮತ್ತು ಸಂಗಡಿಗರನ್ನು ವಶಕ್ಕೆ ಪಡೆದಿದ್ದಾರೆ.