ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12 ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್ಪೇಟೆ ಪೊಲೀಸ್ ಠಾಣೆ ಪಿಎಸೈ ಶಿವಾನಂದ್ ಕೆ ರವರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿತ್ತು.
ಈ ದಾಳಿಯಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವುಕುಮಾರ್ ಮತ್ತು ಮಧುಸೂಧನ್ ಇದ್ದರು.