Headlines

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ.

ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು.



ನಂತರ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *