ರಿಪ್ಪನ್ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
 ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು.
 ಇಬ್ಬರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಒಯ್ಯುತಿದ್ದಾಗ ಪಾದಚಾರಿ ಚಿನ್ನಪ್ಪ ಮೃತಪಟ್ಟಿದ್ದರು.
 ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ನದೀಮ್ ಇಂದು ಬೆಳಗಿನಜಾವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
 ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿತ್ತು .
 ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿತ್ತು.
 


