Headlines

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 




ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ.




”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು” ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಆದರೆ ಈ ಬಗ್ಗೆ ಅಧಿಕೃತವಾಗಿ ಈಶ್ವರಪ್ಪನವರ ಕಡೆಯಿಂದ ಯಾವುದೇ ಮಾಹಿತಿ‌ ಬಂದಿರುವುದಿಲ್ಲ,ಹಾಗಾಗಿ ಪತ್ರದ ಕುರಿತು ಇನ್ನಷ್ಟೇ ಈಶ್ವರಪ್ಪ ಸ್ಪಷ್ಟನೆ ನೀಡಬೇಕಾಗಿದೆ.





Leave a Reply

Your email address will not be published. Required fields are marked *