ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ.
ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.