ಸಾಗರ : ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.
ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ ಸುಮಾರು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ಅವರನ್ನ ರವಾನಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.