ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.




ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ.


ಇನ್ನೂ ಈ ಪ್ರಕರಣದ ಆರೋಪಿ ಸತೀಶ್ ವಿರುದ್ಧ ಪೊಲೀಸರಿಗೆ ಕಳೆದ 16 ನೇ ತಾರೀಖು ಮತ್ತೊಂದು ದೂರು ದಾಖಲಾಗಿತ್ತು. ಕಾರ್ತಿಕ್​ ಎಂಬುವವರು ತನ್ನ ಸ್ನೇಹಿತನಾದ ಸತೀಶ್​ ಆನ್ ಲೈನ್ ವೆಬ್ ಸೈಟ್ / ಆಪ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡಿಸುತಿದ್ದು, ಆತನಿಗೂ ಇದರಿಂದ ಹಣ ಮಾಡಿಕೊಡುವ ಐಡಿಯಾ ಕೊಟ್ಟಿದ್ದ ಎಂದು ದೂರಿದ್ದಾರೆ. ಅಲ್ಲದೆ, ಆತ ಹೇಳಿದ ಕಾರಣಕ್ಕೆ  3 ರಿಂದ 4 ವರ್ಷಗಳಿಂದ ಸತೀಶನಿಗೆ ಕಾರ್ತಿಕ್​ ನಿರಂತರವಾಗಿ ಹಣ ಕೊಡುತ್ತಾ ಬಂದಿದ್ದರಂತೆ. ಕೊನೆಗೆ  ಕೊಟ್ಟ ಹಣ ಕೇಳಿದ್ದಕ್ಕೆ , ಬೆಟ್ಟಿಂಗ್‌ನಲ್ಲಿ ನಿಮ್ಮ ಹಣ ಹೋಯಿತು ಅಂತ ಹೇಳಿ ಸುಮಾರು ರೂ. 3,00,000  ಹಣವನ್ನು ಹಿಂದಿರುಗಿಸದೇ ನಂಬಿಸಿ ಮೋಸ ಮಾಡಿದ್ದ ಎಂದು ಪೊಲೀಸರಿಗೆ ಕಾರ್ತಿಕ್ ದೂರು ನೀಡಿದ್ದ.





ಈ ಸಂಬಂಧ  ಐಪಿಸಿ 78(1) (ಎ)(6) ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಕಲಂ 420 ಐಪಿಸಿ ಕಾಯ್ದೆ  ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಪೊಲಿಸರು ಆರೋಪಿ ಸತೀಶ್​ ನಿಂದ ಒಟ್ಟು  18,26,336 ರೂ ಹಣವನ್ನು ಜಪ್ತಿ ಮಾಡಿ, 02 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದೆ. ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 25,46,336/- ರೂ. ಗಳನ್ನು ಜಪ್ತಿ ಮಾಡಿರುವ ಪೊಲೀಸರು 15 ಮೊಬೈಲ್ ಫೋನ್ ಗಳು ಮತ್ತು 1 ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago