ಏಪ್ರಿಲ್ 12 ರಂದು ಶಿವಮೊಗ್ಗ ನಗರದ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್