w
Headlines
Home » ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು 

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ.




ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು ಸಾಗರದ ಕಾಂಗ್ರೆಸ್ ಕಾರ್ಯಾಲಯದ ಬಳಿ ಸೇರುವಂತೆ ಮನವಿ ಮಾಡಿದ್ದಾರೆ.




ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದು ಕಾಂಗ್ರೆಸ್ ಕಾರ್ಯಾಲಯದಿಂದ ಉಪವಿಭಾಗಧಿಕಾರಿ ಕಚೇರಿಯವರೆಗೂ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಶನಿವಾರ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ ವೇಳೆ ಸಾಗರದಲ್ಲಿ ಜನಸಾಗರವೇ ಹರಿದುಬಂದಿತ್ತು ಇನ್ನೂ ಬೇಳೂರು ಸರಳವಾಗಿ ಎಂದರೂ ಸಹ ಕ್ಷೇತ್ರದಲ್ಲಿ ಭಾರಿ ಸಂಖ್ಯೆಯಲ್ಲಿರುವ ಬೇಳೂರು ಅಭಿಮಾನಿಗಳು ಎಷ್ಟು ಸಂಖ್ಯೆಯಲ್ಲಿ ಸೇರುತ್ತಾರೆ ಎಂದು ಕಾದುನೋಡಬೇಕಾಗಿದೆ.





Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.