ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.




ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ.


ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ. ಹೆಚ್‌.ಎಂ.ಚಂದ್ರಶೇಖರಪ್ಪ  ಅವರು 1999ರಲ್ಲಿ ಶಿವಮೊಗ್ಗದ ಶಾಸಕರಾಗಿದ್ದರು. ಹೆಚ್‌.ಸಿ.ಯೋಗೇಶ್‌ ಅವರು ಕೂಡ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಈಗ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ.


ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶ್ರೀನಿವಾಸ್‌ ಕರಿಯಣ್ಣ  ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಇವರ ತಂದೆ ಕರಿಯಣ್ಣ ಅವರು ಶಿವಮೊಗ್ಗ ನಗರಸಭೆ ಸದಸ್ಯರಾಗಿದ್ದರು. 1989 ಮತ್ತು 1999ರಲ್ಲಿ ಹೊಳೆಹೊನ್ನೂರು ಕ್ಷೇತ್ರದಿಂದ ಶಾಸಕರಾಗಿದ್ದರು. ತಂದೆಯ ಅಪೇಕ್ಷೆಯಂತೆ, ವೈದ್ಯ ವೃತ್ತಿಗೆ ಶ್ರೀನಿವಸ್‌ ಕರಿಯಣ್ಣ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಆರಂಭಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಈ ಭಾರಿ ಪಕ್ಷ ಪುನಃ ಶ್ರೀನಿವಾಸ್‌ ಕರಿಯಣ್ಣ ಅವರನ್ನು ಕಣಕ್ಕಿಳಿಸಿದೆ.




ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಾಂಗ್ರೆಸ್‌ ಪಕ್ಷದ ಗೋಣಿ ಮಾಲ್ತೇಶ್‌ ಅವರು ತೀವ್ರ ಪೈಪೋಟಿ ಒಡ್ಡಿದ್ದರು. ಯಡಿಯೂರಪ್ಪ ಅವರು 86,983 ಪಡೆದುಕೊಂಡರೆ, ಕಾಂಗ್ರೆಸ್‌ ಪಕ್ಷದ ಗೋಣಿ ಮಾಲ್ತೇಶ್‌ ಅವರು 51,586 ಮತಗಳನ್ನು ಪಡೆದಿದ್ದರು. ಈ ಬಾರಿ ಪುನಃ ಅವರನ್ನೆ ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಒಟ್ಟಾರೆಯಾಗಿ ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಚುನಾವಣೆ ರಂಗೇರಿದೆ.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

8 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

9 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago