ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ.
”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಆದರೆ ಈ ಬಗ್ಗೆ ಅಧಿಕೃತವಾಗಿ ಈಶ್ವರಪ್ಪನವರ ಕಡೆಯಿಂದ ಯಾವುದೇ ಮಾಹಿತಿ ಬಂದಿರುವುದಿಲ್ಲ,ಹಾಗಾಗಿ ಪತ್ರದ ಕುರಿತು ಇನ್ನಷ್ಟೇ ಈಶ್ವರಪ್ಪ ಸ್ಪಷ್ಟನೆ ನೀಡಬೇಕಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್