ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಶುಕ್ರವಾರ ಚೂರಿ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ.
ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಹೊಸಮನೆ ಸತ್ಯಸಾಯಿನಗರದಲ್ಲಿ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ನವೀನ್ ಗೆ ಇತ್ತೀಚೆನ ಒಂದು ವರ್ಷದ ಹಿಂದೆ ಮದುವೆಯಾಗಿದ್ದು ಒಂದು ಮಗುವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಜಿಕೆ ಭೇಟಿ ನೀಡಿದ್ದಾರೆ.