ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate

“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ
ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ.

ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸುವ ಮೂಲಕ ವಿಶಿಷ್ಠ ಕೊಡುಗೆ ನೀಡುವಲ್ಲಿ ಸಾಫಲ್ಯ ಕಂಡಿರುವುದು ಇವರ ವೈಶಿಷ್ಟö್ಯ.

ಹಿನ್ನಲೆ; ಮೂಲತ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಳಲ್ಕೆಯ ಸಮೀಪದ ದುಮ್ಮಿ ಗ್ರಾಮದ ಇವರ ಕುಟುಂಬದ ಪೂರ್ವಿಕರು 1864ರ ಆಸುಪಾಸಿನಲ್ಲಿ ಹೊಸನಗರ ತಾಲೂಕಿಗೆ ವಲಸೆ ಬಂದು ಇಲ್ಲಿನ ಕಸಬಾ ಹೋಬಳಿಯ ದುಮ್ಮ ಗ್ರಾಮದಲ್ಲಿ ನೆಲೆ ನಿಂತರಂತೆ. ನೂರಾರು ಎಕರೆ ಕೃಷಿಭೂಮಿ ಹೊಂದಿದ್ದ ಇವರ ಕುಟುಂಬದ ಹಿರಿಯರಾಗಿದ್ದ ಬಸಪ್ಪಗೌಡ ಎಂಬುವವರು ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಲ್ಲಿ ಈ ಭಾಗದ ಎಂಆರ್‌ಎ ಸಹ ಆಗಿ ಕಾರ್ಯ ನಿರ್ವಹಿಸಿದ್ದರಂತೆ.


ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ದುಮ್ಮ ಡಿ.ವಿ. ರೇವಣಪ್ಪಗೌಡ ಅವರ ಹುಟ್ಟೂರು. 1952ರಲ್ಲಿ ಇವರ ಜನನ. ತಂದೆ ವೀರಭದ್ರಪ್ಪಗೌಡ. ತಾಯಿ ಶಾವಮ್ಮ. ಬಾಲ್ಯದಿಂದಲೇ ಶಾಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯಂತ ಆಸಕ್ತಿಯಿಂದ ಭಾಗಿಯಾಗಿ ತನ್ನ ಪ್ರತಿಭೆ ಪ್ರದರ್ಶಿಸಿ ಅತ್ಯುನ್ನತ ಶ್ರೇಣೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಇವರನ್ನು ಸಾಧನೆಯ ಹಾದಿಯಲ್ಲಿ ಸಾಗುವಂತೆ ಮಾಡಿತು. ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪೂರೈಸಿ, ಪದವಿ ಶಿಕ್ಷಣಕ್ಕಾಗಿ ದೂರದ ಮೈಸೂರಿನತ್ತ ಇವರು ಮುಖ ಮಾಡಬೇಕಾಯಿತು.  ಮೈಸೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತçದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅಲ್ಲದೆ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ಬಳಿಕ ಕೃಷಿ ಹಾಗೂ ಸ್ಥಳೀಯ ರಾಜಕಾರಣದಲ್ಲಿ ಗುರುತಿಸಿಕೊಳ್ಳವ ಪ್ರಯತ್ನ ಮಾಡಿ ಅಲ್ಲಿಯೂ ಸೈ ಎನಿಸಿಕೊಂಡರು.
ಇದರ ಫಲವಾಗಿ ಸುಮಾರು ಹತ್ತು ವರ್ಷಗಳ ಕಾಲ ಮಂಡಲ ಪ್ರಧಾನರಾಗಿ ಅನೇಕ ಜನಪರ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು. ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ, ಎಸ್. ಬಂಗಾರಪ್ಪ ಅವರ ನಿಕಟವರ್ತಿ ಆಗಿದ್ದ ಡಿವಿಆರ್, ಹಾಲಿ ಶಾಸಕ ಹರತಾಳು ಹಾಲಪ್ಪ ಅವರ ಅನುಯಾಯಿ ಸಹ.
ತಮ್ಮ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಅಡಿಕೆ, ತೆಂಗು, ಮೆಣಸು, ಶುಂಠಿ ಬಾಳೆ ಸೇರಿದಂತೆ ವಿವಿಧ ಬಗೆಯ ಕೃಷಿ ಕೈಗೊಳ್ಳುವ ಮೂಲಕ ಪ್ರಗತಿಪರ ಕೃಷಿಕ ಎಂಬ ಹೆಗ್ಗಳಿಕೆ ಸಹ ಇವರಿಗೆ ಸಲ್ಲುತ್ತದೆ. 1980ರಲ್ಲಿ ಮಡದಿ ವಿನೋಧ ಅವರೊಂದಿಗೆ ವಿವಾಹವಾಗಿ ಓರ್ವ ಪುತ್ರ, ಪುತ್ರಿ ಇದ್ದಾರೆ.

ಪ್ರಸಕ್ತ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷರಾಗಿ, ಹೊಸನಗರ ತಾಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾನವಹಕ್ಕು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಬ್ರಹ್ಮಕುಮಾರಿ ಸಂಸ್ಥೆಯ ಅನುಯಾಯಿ ಕೂಡ ಆಗಿದ್ದಾರೆ. ಪೋಟೋಗ್ರಫಿ, ಪ್ರವಾಸ, ಡ್ರೆವಿಂಗ್, ಸಾಹಿತ್ಯ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಡಿವಿಆರ್, ಸಮಾಜಸೇವೆ, ಧರ್ಮಸಂಸ್ಕಾರಕ್ಕಾಗಿ ತಮ್ಮ ಸ್ವಗೃಹದಲ್ಲೆ 2004ರಲ್ಲಿ ರಂಭಾಪೂರಿ ಜಗದ್ಗುರುಗಳು ಸೇರಿದಂತೆ ಗುಗ್ಗೆಹಳ್ಳಿ, ಮಳಲಿಮಠ ಮೊದಲಾದ ಸುಮಾರು 20 ಸ್ವಾಮೀಜಿಯವರಿಂದ ಇಷ್ಟಲಿಂಗ ಪೂಜೆ ಕೈಗೊಂಡು ಸಾರ್ಥಕಭಾವ ಮೆರೆದಿದ್ದಾರೆ.

ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಪರಿಗಣಿಸಿ ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ 2021ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಅಲ್ಲದೆ, ಇತ್ತೀಚೆಗೆ ಬೆಂಗಳೂರಿನ ಭಾತರರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನೀಯರಿAಗ್ ಪ್ರತಿಷ್ಠಾನ ಟ್ರಸ್ಟ್(ರಿ) ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ 11ನೇ ಸಮ್ಮೇಳನದಲ್ಲಿ  ವಿಶ್ವೇಶ್ವರಯ್ಯ ರಾಷ್ಟಿçÃಯ ಸದ್ಬಾವನಾ ರಾಷ್ಟç ಪ್ರಶಸ್ತಿ ನೀಡಿ ಇವರನ್ನು ಗೌರವಿಸಿದೆ. ಇದು ತಾಲೂಕಿನ ಜನತೆಗೆ ಸಂದ ಗೌರವವೂ ಆಗಿದೆ.

ದೇಶದ ಭವ್ಯ ಪರಂಪರೆ, ಸಂಸ್ಕೃತಿ, ಶಿಕ್ಷಣದ ಮೇಲೆ ಇಂದು ಅವ್ಯಾಹತವಾಗಿ ನಡೆಯುತಿರುವ ಪರಕೀಯ ದಾಳಿ ವೇಳೆಯಲ್ಲೆ, ತಮ್ಮ ನಿಸ್ವಾರ್ಥ ಸೇವಾ ಮನೋಭಾವದಿಂದ ಹಳಿ ತಪ್ಪದಂತೆ ಸಮಾಜವನ್ನು ಮುನ್ನೆಡಸಲು ಡಿವಿಆರ್ ನೀಡುತ್ತಿರುವ ಕೊಡುಗೆ ಅಪಾರವಾದುದು. ಇಂತಹ ಮಹಾನೀಯರನ್ನು ಸಮಾಜ ಮತ್ತಷ್ಟು ಗುರುತಿಸುವಂತಾಗಲಿ ಎಂಬುದೇ ಜನಸಾಮಾನ್ಯರ ಆಶಯವೂ ಆಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

4 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

4 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

14 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

22 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

23 hours ago