ತೀರ್ಥಹಳ್ಳಿ : ತೂದೂರು ಗ್ರಾಮಕ್ಕೆ ಬರಲಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಸಿಎಂ ಫ್ಲೈಟ್|bommai

ನಾಳೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮಕ್ಕೆ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಆಗಮಿಸಿಲಿದ್ಧಾರೆ.




ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ. .

ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ ಪರಿಶಿಷ್ಟ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.




ಇನ್ನೂ 01.00:  ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. 1.30 ರ ಸುಮಾರಿಗೆ ಬರಲಿರುವ ಸಿಎಂ  ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಮೂಲಕ ತುದೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. 2 .45 ಕ್ಕೆ ತೂದೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಇನ್ನೂ ಸಂಜೆ 4.30 ರವರೆಗೂ ತೂದೂರಿನಲ್ಲಿ ಉಳಿಯಲಿರುವ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಬೈ ರೋಡ್ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. /.5. 45 ಕ್ಕೆ ವಿಶೇಷವಿಮಾನದ ಮೂಲಕ ಹೊರಟು ಸಂಜೆ 6.30 ಕ್ಕೆ ಹೆಚ್​ಎಎಲ್​ ವಿಮಾನ ನಿಲ್ಧಾಣವನ್ನು ತಲುಪಲಿದ್ಧಾರೆ.




ವಿಶೇಷ ಅಂದರೆ, ಬಸವರಾಜ ಬೊಮ್ಮಾಯಿಯವರ ಸಂಬಂಧಿಕರ ಮನೆಯು ತೂದೂರಿನಲ್ಲಿದ್ದು, ಅವರ ಮನೆಗೆ ಬೇಟಿ ನೀಡುವ ಸಲುವಾಗಿ ಬಸವರಾಜ್​ ಬೊಮ್ಮಾಯಿ ಬರುತ್ತಿದ್ಧಾರೆ ಎಂಬ ಮಾತುಗಳು ತೀರ್ಥಹಳ್ಳಿ ಕಾರ್ಯಕರ್ತರಲ್ಲಿ ಕೇಳಿಬಂದಿದ್ದು, ಪಕ್ಷದ ಸಭೆಯಲ್ಲಿಯು ಅವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

4 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago