ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ 95.33ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(95.33ರಷ್ಟು ಫಲಿತಾಂಶ), ಉಡುಪಿ ಜಿಲ್ಲೆಗೆ 2ನೇ ಸ್ಥಾನ, ಕೊಡಗು ಜಿಲ್ಲೆಗೆ 3ನೇ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆ 4ನೇ, ವಿಜಯಪುರ 5ನೇ, ಚಿಕ್ಕಮಗಳೂರು 6ನೇ (83.28) ಮತ್ತು ಶಿವಮೊಗ್ಗ 8ನೇ (83.13) ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ ಶೇಖ್ 600ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.
ದ್ವಿತೀಯ ಪಿಯುಸಿ ಫಲಿತಾಂಶ : ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ.
ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್ ಪಡೆದಿದ್ದಾರೆ. ರಾಜ್ಯದಲ್ಲಿ 09 ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ.
ಅನ್ವಿತಾ.ಡಿ.ಎನ್ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ ರವರ ಪುತ್ರಿ.
ಶಿವಮೊಗ್ಗದ ಕುವೆಂಪು ನಗರದ ಎಸ್.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನ ನೇಹಾಶ್ರೀ ಅವರು 600 ಅಂಕಗಳಿಗೆ 595 ಅಂಕ ಗಳಿಸಿದ್ದಾರೆ. ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 13 ವಿದ್ಯಾರ್ಥಿಗಳು ಈ 595 ಅಂಕ ಗಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಸ್.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ಸಿಬ್ಬಂದಿ ನೇಹಾಶ್ರೀ ಅವರಿಗೆ ಅಭಿನಂದನೆ ಸಲ್ಲಿಸಿದರು.ನೇಹಾಶ್ರೀ ಅವರ ತಂದೆ ಜಯಂತ್ ಕುಮಾರ್ ಅವರು ಬಿ.ಆರ್.ಪಿಯ ರಾಷ್ಟ್ರೀಯ ಪಿಯು ಕಾಲೇಜಿನ ಎಸ್.ಡಿ.ಎ ಆಗಿದ್ದಾರೆ. ತಾಯಿ ಚಂದನಾ.ಎಸ್.ಬಿ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಶೇ.83.13ರಷ್ಟು ಫಲಿಶಾಂತ ಬಂದಿದೆ. ಕಳೆದ ಬಾರಿ ಶೇ.70.14ರಷ್ಟು ಫಲಿತಾಂಶದೊಂದಿಗೆ 08 ಸ್ಥಾನದಲ್ಲಿಯೇ ಇತ್ತು.
ಅಮೃತ ಕಾಲೇಜಿಗೆ 90.28% ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 90.28 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು.
ಕಲಾ ವಿಭಾಗದಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 48 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ 90.56 ರಷ್ಟು ಫಲಿತಾಂಶ. ವಾಣಿಜ್ಯ ವಿಭಾಗದಲ್ಲಿ 73 ವಿದ್ಯಾರ್ಥಿಗಳು ಪರಿಕ್ಷೆಗೆ ಕುಳಿತು 62 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇ. 84.93 ರಷ್ಟು, ವಿಜ್ಞಾನ ವಿಭಾಗದಲ್ಲಿ 49 ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇ. 97.28 ರಷ್ಟು ಫಲಿತಾಂಶ ಗಳಿಸುವುದರೊಂದಿಗೆ ಕಾಲೇಜ್ ಗೌರವವನ್ನು ಹೆಚ್ಚಿಸಿದ್ದಾರೆಂದು ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದ ಸಿಡಿಸಿಯವರು ಅಭಿನಂದಿಸಿದ್ದಾರೆ.