ಶಿವಮೊಗ್ಗ ಪೊಲೀಸರು ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.
ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.
ಇವತ್ತು ಬೆಳಗ್ಗೆ ಕೋಟೆ ಪೊಲೀಸ್ ಸ್ಟೇಷನ್ ಸಿಪಿಐ ಶಿವಪ್ರಸಾದ್ರಿಗೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಬಂಗಾರದ ಆಭರಣಗಳನ್ನು ಅಂಗಡಿಗೆ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಬಂದಿದೆ.
ಈ ಮಾಹಿತಿಯನ್ನ ಆಧರಿಸಿ, ಅನುಮಾನಸ್ಪದ ವ್ಯಕ್ತಿಯನ್ನ ವಿಚಾರಿಸಿದ್ದಾರೆ. ಆತನ ಬಳಿ ಬಂಗಾರದ ಆಭರಣಗಳು ಪತ್ತೆಯಾಗಿದೆ. ಇನ್ನಷ್ಟು ವಿಚಾರಣೆ ನಡೆಸಿ ಆತನ ಅಂಗಡಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಟ್ಟು ಅಂದಾಜು ಮೌಲ್ಯ 5,83,00,000/- ರೂ ಗಳ 9 ಕೆ. ಜಿ 565 ಗ್ರಾಂ ತೂಕದ ಬಂಗಾರದ ಆಭರಣಗಳು ದೊರಕಿದೆ.
ಈ ಆಭರಣಗಳಿಗೆ ಸಂಬಂಧಿಸಿದ ದಾಖಲಾತಿ ಇಲ್ಲದ ಹಿನ್ನೆಯಲ್ಲಿ ಆಭರಣಗಳನ್ನು ಜಪ್ತಿ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆಗೆ ಕೋಟೆ ಪೊಲೀಸರು ಹಸ್ತಾಂತರಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್