ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ

ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪಾತ್ರ ದೊಡ್ಡದು ಎಂದು ಸಹಾಯಕ ಪ್ರಾಧ್ಯಾಪಕ ವೀರನಗೌಡ ಹುಡೇದ ರವರು ತಿಳಿಸಿದರು.


ಇಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ರಿಪ್ಪನ್ ಪೇಟೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಸಮಿತಿ, ಹೊಸನಗರ. ಚುನಾವಣಾ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಸಮಿತಿ ಹೊಸನಗರ ಇದರ ಆಶ್ರಯದಲ್ಲಿ ಮತದಾನದ ಮಹತ್ವ ಕುರಿತು ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.  ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎನ್ ಮಂಜುನಾಥ ಕಾಮತ್ ಗಿಡಕ್ಕೆ ನೀರೆರೆಯುವ ಮುಖಾಂತರ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ಸಭೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ರವರು ಪ್ರಸ್ತಾವಿಕವಾಗಿ ಮಾತನಾಡಿದರು.

ಯುವ ಜನತೆ ಮತದಾನದ ಬಗ್ಗೆ ಜಾಗೃತಿ ಹೊಂದಬೇಕಾದ ಅವಶ್ಯಕತೆ ಬಗ್ಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ. ಚಂದ್ರಶೇಖರ್ ಮಾತನಾಡಿದರು. ಹೋಬಳಿ ಕ.ಸಾ.ಪ. ಸಮಿತಿ ಅಧ್ಯಕ್ಷರಾದ ಆರ್ ನಾಗಭೂಷಣ ಮತ ನೊಂದಾವಣಿ ಬಗ್ಗೆ ಮಾತನಾಡಿದರು. ಕವಿಗಳಾದ  ಗಣೇಶ್ ಮೂರ್ತಿ ನಾಗರ ಕೊಡುಗೆ ಹಾಸ್ಯ ಚಟಾಕಿಯೊಂದಿಗೆ ಮಾತನಾಡಿ ಕವನ ವಾಚಿಸಿದರು.ಹಾಗೂ  ಜಾನಪದ ಕಲಾವಿದ ಆಂಜನೇಯ ಜೋಗಿ ಅವರು ಮತದಾರ ಜಾಗೃತಿ ಬಗ್ಗೆ ಲಾವಣಿ ಹಾಡಿದರು. ಸಭೆಯ ಅಧ್ಯಕ್ಷತೆಯನ್ನು  ಪ್ರಾಂಶುಪಾಲ ಟಿ.ಚಂದ್ರಶೇಖರ್ ವಹಿಸಿದ್ದರು.

ಸಭೆಯಲ್ಲಿ ಸಾಹಿತಿ ಹ.ಆ. ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಲ್ಲಿ ಕುಮಾರಿ ರಮ್ಯಾ ಪ್ರಾರ್ಥನೆ ಮಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಕುನುಗೋಡು ರವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago