ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು.




ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷ ಕ್ಷೇತ್ರದ ಶಾಸಕನಾಗಿದ್ದ ಅವಧಿಯಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತು ಶಾಸನ ಸಭೆಯಲ್ಲಿ 5 ನಿಮಿಷಗಳಷ್ಟು ಮಾತನಾಡದವರು ಈಗ ಪುನ: ಚುನಾವಣೆಗೆ ಸ್ಪರ್ಧಿಸಿದ್ದಾರೆ ಈಗ ಗೆದ್ದು ಏನು ಮಾಡಿಯಾನು…….! ಎಂದು ಲೇವಡಿ ಮಾಡಿ ಈಗ ಮತದಾರರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅವರ ಈ ನಾಟಕವನ್ನು ಜನರು ತಿರಸ್ಕರಿಸುವ ಮೂಲಕ ಬಿಜೆಪಿಗೆ ಬೆಂಬಲಿ ಮತನೀಡಿ ಅಭಿವೃದ್ದಿಗೆ ಅಧ್ಯತೆ ನೀಡಿ ಎಂದು ಮನವಿ ಮಾಡಿದರು.

ಬಸ್‌ಸ್ಟಾಂಡ್ ರಾಘವೇಂದ್ರರ ಎಂದು ಲೇವಡಿ ಮಾಡುತಿದ್ದವರಿಗೆ ರಾಘವೇಂದ್ರ ಬಸ್‌ಸ್ಟಾಂಡ್‌ನೊಂದಿಗೆ ವಿಮಾನ ನಿಲ್ದಾಣವನ್ನು ಮಾಡಿ ಉತ್ತರ ನೀಡಿದ್ದಾರೆ.




ಬಿ.ಎಸ್.ಯಡಿಯೂರಪ್ಪ ಬರೀ ಲಿಂಗಾಯಿತ ನಾಯಕರಾಗದೇ ಸರ್ವ ಜನಾಂಗದ ನಾಯಕರು ಅವರು ಲಿಮಗಾಯಿತರಿಲ್ಲದ ಮಂಗಳೂರು ಕುಂದಾಪುರ ಬೈಂದೂರು ಕಡೆಯಲ್ಲಿ ಹೋದರೆ ಬೇರೆ ಜಾತಿಯವರು ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಾರೆಂದು ಹೇಳಿ ಬರೀ ಲಿಂಗಾಯಿತ ಸಮಾಜದ ಆಭಿವೃದ್ದಿಗೆ ಅನುದಾನ ಕೊಡದೇ  ನಮ್ಮ ಈಡಿಗಾ ಸಮಾಜದ ಮಠಕ್ಕೂ 5 ಕೋಟಿ ರೂ ಹಣ ಕೊಡಿಸಿರುವುದಾಗಿ ವಿವರಿಸಿ ಸಣ್ಣ ಸಣ್ಣ ಜಾತಿ ಪಗಂಡದವರಿಗೂ ಅನುದಾನ ಕೊಡಿಸಿರುವುದಾಗಿ ಹೇಳಿ ಅಭಿವೃದ್ದಿಯೇ ನಮ್ಮ ಮೂಲ ಮಂತ್ರವಾಗಿದ್ದು ಮತದಾರರನ್ನು ಪ್ರೀತಿ ವಿಶ್ವಾಸದಿಂದ ಕಾಣಲು ಶಾಸಕನಾಗಬೇಕಾಗಿಲ್ಲ ನಮ್ಮ ಹೃದಯಾಂತರಾಳದಲ್ಲಿದ್ದರೆ ಸಾಕು ಎಂದು ತಿರುಗೇಟು ನೀಡಿದರು.

ಚುನಾವಣೆ ಫಲಿತಾಂಶ ಬಂದ ಅರು ತಿಂಗಳಲ್ಲಿ ಆರಸಾಳು ರೈಲ್ವೆ ನಿಲ್ದಾಣದಲ್ಲಿ ಎಲ್ಲ ರೈಲುಗಳನ್ನು ನಿಲುಗಡೆ ಮಾಡುವ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ಶಾಸಕ ಹರತಾಳು ಹಾಲಪ್ಪ ನೀಡಿದರು.

ನಮ್ಮ ಕುಟುಂಬವನ್ನು ಯಾರು ಒಡೆದಿಲ್ಲ : ಡಾ ರಾಜನಂದಿನಿ
ಕಾಗೋಡು ಪುತ್ರಿ ಡಾ ರಾಜನಂದಿನಿ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಗೋಡು ಮನೆ ಮುರಿದಿದ್ದಾರೆ ಎಂದು ಆರೋಪಿಸುತ್ತಾ ಕಾಗೋಡು ತಿಮ್ಮಪ್ಪ ರವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಾ ಮತ ಯಾಚನೆ ಮಾಡುತಿದ್ದು ಅದು ಸತ್ಯಕ್ಕೆ ದೂರವಾಗಿದೆ ನಮ್ಮ ಕುಟುಂಬವನ್ನು ಯಾರು ಒಡೆದಿಲ್ಲ ನಾನು ಹಾಗೂ ನಮ್ಮ ತಂದೆಯವರು ಚೆನ್ನಾಗಿಯೇ ಇದ್ದೇವೆ ನಮ್ಮ ರಾಜಕೀಯ ದಾರಿ ವಿಭಿನ್ನವಾಗಿದೆ ಅಷ್ಟೇ ಎಂದರು.



ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಮಾತನಾಡಿ ಬೇಳೂರು ಗೋಪಾಲಕೃಷ್ಣ ಒಬ್ಬ ನಾಲಾಯಕ್ ನಾಯಕ ಆಂತಹವರನ್ನು ಆಯ್ಕೆ ಮಾಡುವ ಬದಲು ಅಭಿವೃದ್ಧಿಯ ಹರಿಕಾರ ಕ್ಷೇತ್ರದ ಸಮಸ್ಯೆಗಳ ಕುರಿತು ಹೋರಾಟ ನಡೆಸಿ ಅನುಷ್ಟಾನಗೊಳಿಸುವಂತಹ ವ್ಯಕ್ತಿ ಹರತಾಳು ಹಾಲಪ್ಪನವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾಗೋಡು ಪುತ್ರಿ ಡಾ.ರಾಜಾನಂದಿನಿ,ಬಿಜೆಪಿ ಮಂಡಲದ ಆಧ್ಯಕ್ಷ ಗಣಪತಿ ಬೆಳಗೋಡು,ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್ ,ಜಿ.ಪಂ ಮಾಜಿ ಸದಸ್ಯೆ .ಟಿ.ನಾಗರತ್ನ,ಹುಸೇನ್‌ಸಾಬ್,ಘಟಕದ ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಸುರೇಶ್‌ಸಿಂಗ್,ದೇವೇಂದ್ರಪ್ಪಗೌಡ,ರಾಮಚಂದ್ರಪ್ಪ ಹರತಾಳು,ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಜೆಡಿಎಸ್ ಪಕ್ಷ ತೊರೆದು ಶಾಸಕರ ಸಮ್ಮಖದಲ್ಲಿ ನೂರಾರು ಯುವಕರು ಬಿಜೆಪಿ ಸೇರ್ಪಡೆಯಾದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 hour ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

7 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago