ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ.
ಇನ್ನೂ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರವರು ಜೆಡಿಎಸ್ ಮುಳುಗು ಹಡಗಾಗಿದೆ , ಅದೇ ರೀತಿ ಕಾಂಗ್ರೆಸ್ ಕೂಡ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿರುವ ಪಕ್ಷವಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ ನಮ್ಮದು ಕಾರ್ಯಕರ್ತರ ಪಾರ್ಟಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಾಡಿರುವ ಕಾರ್ಯಸಾಧನೆಯ ಜೊತೆ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ ಎಂದಿದ್ದಾರೆ.
ಇನ್ನೂ ಬಿಜೆಪಿಯ ಪಟ್ಟಿಯಲ್ಲಿ 52 ನೂತನ ಮುಖಗಳಿಗೆ ಅವಕಾಶ ನೀಡಲಾಗಿದೆ ಓಬಿಸಿ 32 ಎಸ್ಸಿ 30 ಎಸ್ಟಿ ಜನಾಂಗಕ್ಕೆ 16 ಟಿಕೆಟ್ ನೀಡಲಾಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿಯಲ್ಲಿ 9 ಜನರ ಡಾಕ್ಟರು ಇದ್ದಾರೆ ಹಾಗೂ ಪ್ರೊಫೆಸರ್ 5 , ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ತಲಾ ಒಂದು ಟಿಕೆಟ್ ನೀಡಲಾಗಿದೆ. ಮೂವರು ನಿವೃತ್ತ ಸರ್ಕಾರಿ ನೌಕರರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶಿಗ್ಗಾವಿಯವವರಿಗೆ ಟಿಕೆಟ್ ನೀಡಲಾಗಿದೆ.
ಶಿವಮೊಗ್ಗ ಗ್ರಾಮಾಂತರ: ಅಶೋಕ್ ನಾಯ್ಕ್
ತೀರ್ಥಹಳ್ಳಿ : ಆರಗ ಜ್ಞಾನೇಂದ್ರ
ಸಾಗರ : ಹರತಾಳು ಹಾಲಪ್ಪ
ಭದ್ರಾವತಿ: ಮಂಗೋಟಿ ರುದ್ರೇಶ್
ಸೊರಬ: ಕುಮಾರ್ ಬಂಗಾರಪ್ಪ
ಶಿಕಾರಿಪುರ: ಬಿವೈ ವಿಜಯೇಂದ್ರ