ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರಿಗೆ ಟಿಕೆಟ್ ಘೋಷಣೆ|BJP


ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್​ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್​​ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ. 

ಇನ್ನೂ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ರವರು ಜೆಡಿಎಸ್​ ಮುಳುಗು ಹಡಗಾಗಿದೆ , ಅದೇ ರೀತಿ ಕಾಂಗ್ರೆಸ್ ಕೂಡ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿರುವ ಪಕ್ಷವಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ ನಮ್ಮದು ಕಾರ್ಯಕರ್ತರ ಪಾರ್ಟಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಾಡಿರುವ ಕಾರ್ಯಸಾಧನೆಯ ಜೊತೆ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ ಎಂದಿದ್ದಾರೆ. 

ಇನ್ನೂ ಬಿಜೆಪಿಯ ಪಟ್ಟಿಯಲ್ಲಿ 52 ನೂತನ ಮುಖಗಳಿಗೆ ಅವಕಾಶ ನೀಡಲಾಗಿದೆ ಓಬಿಸಿ 32 ಎಸ್​ಸಿ 30 ಎಸ್​ಟಿ ಜನಾಂಗಕ್ಕೆ 16 ಟಿಕೆಟ್ ನೀಡಲಾಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿಯಲ್ಲಿ 9 ಜನರ ಡಾಕ್ಟರು ಇದ್ದಾರೆ ಹಾಗೂ ಪ್ರೊಫೆಸರ್​ 5 , ಐಎಎಸ್​ ಹಾಗೂ ಐಪಿಎಸ್​ ಅಧಿಕಾರಿಗಳಿಗೆ ತಲಾ ಒಂದು ಟಿಕೆಟ್ ನೀಡಲಾಗಿದೆ. ಮೂವರು ನಿವೃತ್ತ ಸರ್ಕಾರಿ ನೌಕರರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶಿಗ್ಗಾವಿಯವವರಿಗೆ ಟಿಕೆಟ್ ನೀಡಲಾಗಿದೆ. 

ಶಿವಮೊಗ್ಗ ಗ್ರಾಮಾಂತರ: ಅಶೋಕ್​ ನಾಯ್ಕ್​

ತೀರ್ಥಹಳ್ಳಿ : ಆರಗ ಜ್ಞಾನೇಂದ್ರ 

ಸಾಗರ : ಹರತಾಳು ಹಾಲಪ್ಪ

ಭದ್ರಾವತಿ: ಮಂಗೋಟಿ ರುದ್ರೇಶ್

ಸೊರಬ: ಕುಮಾರ್ ಬಂಗಾರಪ್ಪ

ಶಿಕಾರಿಪುರ: ಬಿವೈ ವಿಜಯೇಂದ್ರ 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

7 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

8 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago