ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ

ರಿಪ್ಪನ್‌ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ.




ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು ನೀರಿಲ್ಲದೆ ಪರಿತಪ್ಪಿಸುವಂತಹ ಸ್ಥಿತಿಯಲ್ಲಿ ರೈತರು ತಮ್ಮ ಆಡಿಕೆ ತೋಟವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ತಾಲ್ಲೂಕಿನ ರಿಪ್ಪನ್‌ಪೇಟೆ ಬಾಳೂರು ಕೆಂಚನಾಲ ಆರಸಾಳು ಬೆಳ್ಳೂರು ಹೆದ್ದಾರಿಪುರ ಅಮೃತ ಹುಂಚಾ ಕೋಡೂರು ಸೊನಲೆ ಹರತಾಳು ಇನ್ನಿತರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ನಾಗರೀಕರು ಪರದಾಡುವ ಸ್ಥಿತಿ ಹೇಳದಂತಾಗಿದೆ.

ಇತ್ತೀಚೆಗೆ ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದಾಳದಿಂಬ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿಯಲ್ಲಿ ಪಂಚಾಯ್ತಿಗೆ ಸಾರ್ವಜನಿಕರು ಮನವಿ ಮಾಡಿಕೊಂಡ ಪರಿಣಾಮ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದ್ದು ಕಲುಷಿತ ನೀರು ಸರಬರಾಜಿನಿಂದಾಗಿ ಪ್ರತಿಭಟನೆ ಸಹ ನಡೆದಿರುವ ಬೆನ್ನಲೇ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬರುವೆ ಗವಟೂರು ವಿನಾಯಕನಗರ ಬನ್ನಿನಗರ, ಶಬರೀಶ್‌ನಗರ, ನೆಹರು ಬಡಾವಣೆ, ಶ್ರೀರಾಮನಗರ ಭಾಗಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದ್ದಿದೆ.




ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬುಕ್ಕಿವರೆ ದೋಬೈಲು ಕಳಸೆ ನರ‍್ಲಿಗೆ ತಳಲೆ ಹಾರಂಬಳ್ಳಿ ಕಲ್ಲೂರು ಕಣಬಂದೂರು ಮೂಗುಡ್ತಿ ಇನ್ನಿತರ ಕಡೆಯಲ್ಲಿ ಕುಡಿಯುವ ನೀರಿನ ತೆರೆದ ಬಾವಿಗಳು ತಳಕಾಣುವಂತಾಗಿದ್ದು ಬೋರ್‌ವೆಲ್‌ಗಳಲ್ಲಿ ಸಹ ಅಂತರ್ಜಲ ಇಲ್ಲದೆ ನೀರಿಗಾಗಿ ರೈತರು ಪರಿತಪ್ಪಿಸುತ್ತಿದ್ದು ಆಡಿಕೆ ತೋಟಕ್ಕೆ ನೀರು ಇಲ್ಲದೆ ಮರಗಳು ಒಣಗುತ್ತಿವೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

5 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago