Headlines

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.




ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸಿದ್ದ ಲೀಲಾವತಿ ದೊಡ್ಡಯ್ಯ ಇತ್ತೀಚೆಗೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು ಕಾಗೋಡು ತಿಮ್ಮಪ್ಪ ಹಾಗೂ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಇವರೊಂದಿಗೆ ಇವರ ಪತಿ ದೊಡ್ಡಯ್ಯ ರವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.



ಇದೇ ಸಂಧರ್ಭದಲ್ಲಿ ಕುಕ್ಕಳಲೆ ,ಬಾಳೂರು ಗ್ರಾಮದ ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಅಧಕ್ಷರಾದ ಬಿ ಜಿ ನಾಗರಾಜ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಬಿ ಜಿ ಚಂದ್ರಮೌಳಿ , ಈಶ್ವರಪ್ಪ ಗೌಡ ,ಉಬೇದುಲ್ಲಾ ಷರೀಫ್ ,ಗಣಪತಿ ಗವಟೂರು, ಮಧುಸೂಧನ ,ಚಿಂತೂ ಹಾಗೂ ಇನ್ನಿತರರಿದ್ದರು.



About The Author

Leave a Reply

Your email address will not be published. Required fields are marked *