ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ರಿಪ್ಪನ್ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಲೀಲಾವತಿ ದೊಡ್ಡಯ್ಯ ಇತ್ತೀಚೆಗೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು ಕಾಗೋಡು ತಿಮ್ಮಪ್ಪ ಹಾಗೂ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಇವರೊಂದಿಗೆ ಇವರ ಪತಿ ದೊಡ್ಡಯ್ಯ ರವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಇದೇ ಸಂಧರ್ಭದಲ್ಲಿ ಕುಕ್ಕಳಲೆ ,ಬಾಳೂರು ಗ್ರಾಮದ ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಅಧಕ್ಷರಾದ ಬಿ ಜಿ ನಾಗರಾಜ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಬಿ ಜಿ ಚಂದ್ರಮೌಳಿ , ಈಶ್ವರಪ್ಪ ಗೌಡ ,ಉಬೇದುಲ್ಲಾ ಷರೀಫ್ ,ಗಣಪತಿ ಗವಟೂರು, ಮಧುಸೂಧನ ,ಚಿಂತೂ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್