ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.




ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ, ಸ್ವಯಂಪ್ರೇರಿತವಾಗಿ ಸಾವಿರಾರು ಕಾರ್ಯಕರ್ತರು ಬಂದಿದ್ದಾರೆ ಎಂದರು.


ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಮಾಜಿ ಸಿಎಂ, ಬಿಜೆಪಿ ಕಟ್ಟಾಳು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದು ನಿಜಕ್ಕೂ ಖುಷಿಯ ವಿಚಾರ‌ವೆಂದರು. ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಮೂಲೆಗುಂಪು ಮಾಡಿದ್ರು ಕಣ್ಣೀರು ಹಾಕಿಸಿ, ಅಧಿಕಾರದಿಂದ ಕೆಳಗೆ ಇಳಿಸಿದ್ರು. ಪಕ್ಷಕ್ಕಾಗಿ ದುಡಿದ ನಾಯಕರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆ ಇಲ್ಲದಂತೆ ಮಾಡಿದ್ದಾರೆ. ಮೋದಿ ಬಿಟ್ಟರೇ, ಬೇರೆ ಯಾರಿಗೂ ಬೆಲೆ ಇಲ್ಲ ಎಂಬಂತೆ ಆಗಿದೆ. ಲಕ್ಷಣ್ ಸವದಿ ಡಿಸಿಎಂ ಆಗಿದ್ದವರು. ಅವರಿಗೂ ಸಹ ಟಿಕೆಟ್ ನೀಡಲಿಲ್ಲ ಎಂದರು.




ಹೋಗಿ ಹೋಗಿ ರಮೇಶ್ ಜಾರಕಿಹೊಳಿ ಅಂತವರಿಗೆ ಟಿಕೆಟ್ ಕೋಡ್ತಾರೆ. ಇದನ್ನ ಗಮನಿಸಿದ್ರೇ, ಪಕ್ಷ ದುರಂತದ ಹಾದಿ ಹಿಡಿದಿರೋದು ಗೊತ್ತಾಗುತ್ತೇ. ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಾಮಾನ್ಯ. ಇಲ್ಲಿಂದನೂ ಹೋಗ್ತಾರೆ. ಅಲ್ಲಿಂದಾನೂ ಬರ್ತಾರೆ. ರಾಜಕೀಯ ತಂತ್ರ ಇರ್ತಾವೆ. ಅದಕ್ಕೆಲ್ಲಾ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದರು.

ಹಾಲಪ್ಪನವರ ಬಗ್ಗೆ ಮಾತನಾಡಿ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್,  ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಮನೆ ಹಾಳು ಮಾಡೋ ರಾಜ್ಯದಲ್ಲಿ ಇರೋದು ಹಾಲಪ್ಪನಿಗೆ ಮಾತ್ರ.ಹಾಲಪ್ಪನ ಬಗ್ಗೆ ನಾನು ಟೀಕೆ ಮಾಡೋದೇ ಬೇಡ.ಅವರ ಭ್ರಷ್ಟಾಚಾರ, ಪಕ್ಷ ಒಡೆದಿದ್ದನ್ನ ಅವರ ಪಕ್ಷದವರೇ ಹೇಳ್ತಿದ್ದಾರೆ. ವಿರೋದ ಪಕ್ಷವಾಗಿ ನಾವು ಕೂಡ ನಮ್ಮ ಕೆಲಸ ಮಾಡ್ತೇವೆ. ಹೊಸನಗರ, ಸಾಗರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

6 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

7 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

7 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago